welcome to lavalavika


I made this widget at MyFlashFetish.com.

Saturday, December 18, 2010

ಚಂದ್ರಶೇಖರ ಕಂಬಾರ

ಡಾ. ಚಂದ್ರಶೇಖರ ಕಂಬಾರ (ಜನನ- ೨ ಜನವರಿ ೧೯೩೭) ಜಾನಪದ ಸೊಗಡನ್ನು ತಮ್ಮ ಬರವಣಿಗೆಯಲ್ಲಿ ಮೈದಾಳಿಸಿಕೊಂಡು ಬಂದಿರುವ ಚಂದ್ರಶೇಖರ ಕಂಬಾರರು ಹಲವು ಪ್ರತಿಭೆಗಳ ಸಂಗಮ. ಕವಿನಾಟಕಕಾರಸಂಗೀತ ನಿರ್ದೇಶಕಚಲನಚಿತ್ರ ನಿರ್ದೇಶಕಅಧ್ಯಾಪಕ, ಜಾನಪದ ತಜ್ಞ, ಆಡಳಿತಗಾರ ಇತ್ಯಾದಿ.
ಮುಖ್ಯವಾಗಿ ಕವಿ-ನಾಟಕಕಾರರಾಗಿ ಕಂಬಾರ ಜನಪ್ರಿಯರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಉಪನ್ಯಾಸಕ ವೃತ್ತಿಯಿಂದ ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಪತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈಗ ಬೆಂಗಳೂರಿನ ಬನಶಂಕರಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿಯೂ ಮೂರು ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ೧೯೩೭ ಜನವರಿ ೨ರಂದು ಕಂಬಾರರು ಬೆಳಗಾವಿ ಜಿಲ್ಲೆ ಘೋಡಗೇರಿಯಲ್ಲಿ ಜನಿಸಿದರು. ತಮ್ಮ ಊರಿನ ವಾತಾವರಣದಲ್ಲಿನ ಜಾನಪದ ಹಾಡು, ಕುಣಿತ, ನಾಟಕಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವುಗಳ ಸಂಗ್ರಹ, ಬರವಣಿಗೆಯನ್ನು ರೂಢಿಸಿಕೊಂಡರು. ಉತ್ತರ ಕರ್ನಾಟಕದ ಅದರಲ್ಲೂ ಬೆಳಗಾವಿಧಾರವಾಡದ ಗಂಡುಭಾಷೆಯನ್ನು ಕನ್ನಡ ಸಾಹಿತ್ಯಕ್ಕೆ ಹೊತ್ತು ತಂದರು. ಧಾರವಾಡದ ವರಕವಿ ಡಾ. ದ. ರಾ. ಬೇಂದ್ರೆ ಅವರ ನಂತರ ಭಾಷೆಯನ್ನು ಪರಿಣಾಮಕಾರಿಯಾಗಿ ದುಡಿಸಿಕೊಂಡವರಲ್ಲಿ ಕಂಬಾರರು ಒಬ್ಬರು.
ಕಂಬಾರರು ತಾವೇ ಬರೆದ ಕಾದಂಬರಿಗಳನ್ನು ಚಲನಚಿತ್ರಗಳಾಗಿಸಿದರು. ಕರಿಮಾಯಿ, ಸಂಗೀತಾ, ಕಾಡುಕುದುರೆ ಇವುಗಳಲ್ಲಿ ಪ್ರಮುಖವಾದುವು. ಕಂಬಾರರು ತಮ್ಮ ಚಿತ್ರಗಳಿಗೆ ತಾವೇ ಸಂಗೀತ ನೀಡಿದ್ದಾರೆ. ಕಾಡುಕುದುರೆಯ ಹಿನ್ನಲೆ ಸಂಗೀತದ ``ಕಾಡು ಕುದುರೆ ಓಡಿಬಂದಿತ್ತಾsss.." ಹಾಡಿಗೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರಪತಿಗಳ ಫಲಕ ಕೂಡ ಸಿಕ್ಕಿತು. `ಜೀಕೆ ಮಾಸ್ತರ ಪ್ರಣಯ ಪ್ರಸಂಗ' ಕಾದಂಬರಿಯನ್ನು ಕಿರುತೆರೆಗೂ ಅಳವಡಿಸಿದ್ದಾರೆ. ಹತ್ತಾರು ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಿರುವ ಕಂಬಾರರು ಉತ್ತಮ ನಾಟಕಕಾರರು. ಜೊತೆಗೆ ಜಾನಪದ ಶೈಲಿಯ ಹಾಡುಗಳಿಗೆ ಜನಪ್ರಿಯರು. ತಾವೇ ಸ್ವತಃ ಹಾಡುಗರೂ ಸಹಾ.
ಹೇಳತೇನ ಕೇಳ, ಸಿರಿಸಂಪಿಗೆ, ಬೆಳ್ಳಿಮೀನು, ಋಷ್ಯಶೃಂಗ, ಕಾಡುಕುದುರೆ, ನಾಯಿಕಥೆ, ಹರಕೆಯ ಕುರಿ, ಬೋಳೇಶಂಕರ, ಸಿಂಗಾರವ್ವ ಮತ್ತು ಅರಮನೆ ಮುಂತಾದವು ಇವರ ಪ್ರಮುಖ ಕೃತಿಗಳು. ಮಹಾಮಾಯಿ ಅವರ ಇತ್ತೀಚಿನ ಹೊಸ ನಾಟಕ ಕೃತಿ.ಶಿಖರ ಸೂರ್ಯ ೨೬ ವರ್ಷಗಳ ನಂತರ ಹೊರಬಂದ ಕಾದಂಬರಿ;ಡಿಸೆಂಬರ ೨೦೦೬ರಲ್ಲಿ ಬಿಡುಗಡೆಯಾಯಿತು. ಕನ್ನಡ ಜಾನಪದ ವಿಶ್ವಕೋಶ ಸಂಪಾದಿತ ಕೃತಿ. ಸುಮಾರು ನಲವತ್ತಕ್ಕೂ ಮಿಕ್ಕಿ ಕೃತಿಗಳು ಹೊರಬಂದಿವೆ.
ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕಂಬಾರರು ೧೯೯೧ರಲ್ಲಿ ತಮ್ಮ `ಸಿರಿಸಂಪಿಗೆ' ನಾಟಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.

No comments:

Post a Comment