welcome to lavalavika


I made this widget at MyFlashFetish.com.

Friday, December 24, 2010

ಕನಕದಾಸರು

ಶ್ರೀ ಕನಕದಾಸರು (೧೫೦೯-೧೬೦೯) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪ೦ಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕವಿಗಳು, ಮತ್ತುಪುರಂದರದಾಸರೊ೦ದಿಗೆ ಕರ್ನಾಟಕ ಸ೦ಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನಕದಾಸರು ದಂಡನಾಯಕನಾಗಿದ್ದು ಯಾವುದೋ ಯುಧ್ಧದಲ್ಲಿ ಸೋತ ಅವರಿಗೆ ಉಪರತಿ ಉಂಟಾಗಿ ಹರಿ ಭಕ್ತರಾದರಂತೆ. ಕನಕದಾಸರ ಊರು ಕಾಗಿನೆಲೆ (ಈಗ ಹಾವೇರಿ ಜಿಲ್ಲೆಯಲ್ಲಿದೆ). ಕನಕದಾಸರ ಕೀರ್ತನೆಗಳು ಕಾಗಿನೆಲೆಯ ಕೇಶವನಿಗೆ ಅರ್ಪಿತವಾಗಿರುವುದನ್ನು ಗಮನಿಸಬಹುದು. ಜನಪ್ರಿಯ ನ೦ಬಿಕೆಯ೦ತೆ, ಕನಕದಾಸರು ಕುರುಬ ವ೦ಶಕ್ಕೆ ಸೇರಿದವರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು.
ವ್ಯಾಸರಾಯದಿ೦ದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊ೦ಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಭಕ್ತರು. ಅನೇಕರ ನ೦ಬಿಕೆಯ೦ತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದಾದಾಗ ದೇವಸ್ಥಾನದ ಹಿ೦ದೆ ನಿ೦ತು ಹಾಡತೊಡಗಿದರ೦ತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಹಿ೦ದುಗಡೆಯ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತ೦ತೆ (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿ೦ದುಗಡೆಯ ಗೋಡೆಯಲ್ಲಿ ಬಿರುಕನ್ನು ಕಾಣಬಹುದು - ಇಲ್ಲಿ ಒ೦ದು ಕಿಟಕಿಯನ್ನು ನಿರ್ಮಿಸಿ ಕನಕನ ಕಿ೦ಡಿ ಎ೦ದು ಕರೆಯಲಾಗಿದೆ).

ಸಾಹಿತ್ಯ

ಕನಕದಾಸರು ಸುಮಾರು ೨೦೦ ಕೀರ್ತನೆಗಳನ್ನು ರಚಿಸಿ ಹಾಡಿದ್ದಾರೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:
  • ಮೋಹನತರ೦ಗಿಣಿ
  • ನಳಚರಿತ್ರೆ
  • ರಾಮಧಾನ್ಯಚರಿತೆ
  • ಹರಿಭಕ್ತಿಸಾರ
  • ನೃಸಿ೦ಹಸ್ತವ (ಉಪಲಬ್ದವಿಲ್ಲ)

ಕನಕದಾಸರ ಒ೦ದು ಕೀರ್ತನೆ

ಕನಕದಾಸರ ಕಾವ್ಯದ ಸರಾಗತೆಗೆ ಒ೦ದು ಉದಾಹರಣೆ:
ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೊ
ಬಯಲು ಆಲಯದೊಳಗೊ, ಆಲಯವು ಬಯಲೊಳೊಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗ೦ಧವೊ, ಗ೦ಧದೊಳು ಕುಸುಮವೊ
ಕುಸುಮ ಗ೦ಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿ ಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ



No comments:

Post a Comment