ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಬ್ರಿಟೀಷರಿಂದ ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ದೇಶದಾದ್ಯಂತ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು-ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ, ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತರೆ. ಈ ಭಾಷಣದಲ್ಲಿ, ದೇಶದ ಸಾಧನೆ,ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಣಿದ ನಾಯಕರನ್ನು ಸ್ಮರಿಸಲಾಗುತ್ತದೆ.
ಸ್ವಾತ್ರಂತ್ರ್ಯದ ಹಾದಿ
ಸ್ವಾತ್ರಂತ್ರ್ಯದ ಹಾದಿ
ಜವಾಹರ್ ಲಾಲ್ ನೆಹರು ರವರು ಲಾರ್ಡ್ ಮೌಂಟ್‌ಬ್ಯಾಟನ್ ಅವರಿಂದ ಆಗಸ್ಟ್ ೧೫, ೧೯೪೭ ರಂದು ದೇಶದ ಪ್ರಥಮ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದ ಜವಾಹರ್ ಲಾಲ್ ನೆಹರು ರವರಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ
ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ..... ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ, ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ . |
ಸಂವಿಧಾನ ರಚನಾಸಭೆಯು ಸಂವಿಧಾನದ ಕರಡನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು . ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು .ನಂತರ ಸ್ವತಂತ್ರ ಸಾರ್ವಭೌಮ ಭಾರತವು ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು . ಅವು 1961ರಲ್ಲಿ ಪೋರ್ತುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು ೧೯೫೪ರಲ್ಲಿ ಒಪ್ಪಿಸಿದ ಪಾಂಡಿಚೇರಿ . ೧೯೫೨ ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು . ಶೇ. ೬೨ ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾಯಿತು .
ಸಂಭ್ರಮದ ಆಚರಣೆ
ಭಾರತದ ಪ್ರಧಾನಮಂತ್ರಿ ದೆಹಲಿಯ ಕೆಂಪು ಕೋಟೆ ಯ ಐತಿಹಾಸಿಕ ಸ್ಥಳದಲ್ಲಿ ಆಗಸ್ಟ್ ೧೫ರಂದು ಭಾರತದ ಧ್ವಜದ ಆರೋಹಣವನ್ನು ನೆರವೇರಿಸುವರು
ಗಾಳಿಪಟಗಳ ಹಾರಾಟ
ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯದಿನದಂದು ಗಾಳಿಪಟಗಳನ್ನು ಹಾರಿಸುವ ಪದ್ದತಿ ಜನಪ್ರಿಯವಾಗಿದೆ . ಅಕಾಶವು ನೂರಾರು ಬಣ್ಣ ಬಣ್ಣದ ಪಟಗಳಿಂದ ಕಂಗೊಳಿಸುವದು. ಜನರು ಗಾಳಿಪಟಗಳನ್ನು ಹರಿಸುವ ಸ್ಪರ್ಧೆಗಳಲ್ಲಿ ತೊಡಗುವರು ಕಟ್ಟಡಗಳ ಬಾಲ್ಕನಿಗಳು ಮತ್ತು ಮನೆಗಳ ಮಾಳಿಗೆಗಳಿಂದ ಜನರು ಗಾಳಿಪಟಗಳನ್ನು ಬಾನಿಗೆ ಹಾರಬಿಡುವರು.ಸಂಜೆಯ ವೇಳೆ ಗಾಳಿಪಟಗಳು ಮುಗಿಲ ಮುಟ್ಟುವಂತೆ ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸದ ಧ್ವನಿಗಳು ಎಲ್ಲೆಲ್ಲೂ ಕೇಳಬರುತ್ತವೆ .
Greetings from Finland. This, through a blog is a great get to know other countries and their people, nature and culture. Come take a look Teuvo images and blog to tell all your friends that your country flag will stand up to my collection of flag higher. Sincerely, Teuvo Vehkalahti Finland.
ReplyDelete