welcome to lavalavika


I made this widget at MyFlashFetish.com.

Friday, December 24, 2010

ಪುರಂದರದಾಸರು



ಶ್ರೀ ಪುರಂದರ ದಾಸರು (೧೪೯೪ – ೧೫೬೪ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸಪದ್ಧತಿಯ ಅನೇಕ ಪ್ರಮುಖರು, ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯ ದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ. ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.

ಬೆಳವಣಿಗೆ

ಪುರಂದರದಾಸರ ತಂದೆಯ ಹೆಸರು ವರದಪ್ಪ ನಾಯಕ, ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇದರಿಂದಲೇ ಅವರು ಮಗನಿಗೆ ಶ್ರೀನಿವಾಸ ಎಂದು ಹೆಸರಿಟ್ಟರಂತೆ. ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಲಕ್ಷ್ಮಿ ದಾನಶೀಲೆಯಾಗಿ ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ.

ಮಾರ್ಪಾಟು

ನಂಬಿಕೆಯಂತೆ, ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಲಕ್ಷ್ಮಿ ಮರುಕದಿಂದ ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ತನ್ನ ಬಗ್ಗೆ ತಾನೇ ನಾಚಿಕೆಪಟ್ಟುಕೊಂಡ ಶ್ರೀನಿವಾಸ ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರ ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ಶ್ರೀನಿವಾಸ ನಾಯಕ ಪುರಂದರ ದಾಸ ಎಂಬ ಹೆಸರನ್ನು ಪಡೆದ.

ಕವಿ ಮತ್ತು ಸಂಗೀತಗಾರ

ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. ಉದಾಹರಣೆಗೆ:
"ಕುದುರೆ ಅಂದಣ ಆನೆ ಬಯಸೋದು ನರಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ"
ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ 'ಪಿಳ್ಳಾರಿ ಗೀತೆಗಳು' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ..... ಇತ್ಯಾದಿ) ಸಂಗೀತದ ಸ್ವರ-ಸಾಹಿತ್ಯ-ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದ ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ.

ಕನಕದಾಸರು

ಶ್ರೀ ಕನಕದಾಸರು (೧೫೦೯-೧೬೦೯) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪ೦ಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕವಿಗಳು, ಮತ್ತುಪುರಂದರದಾಸರೊ೦ದಿಗೆ ಕರ್ನಾಟಕ ಸ೦ಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನಕದಾಸರು ದಂಡನಾಯಕನಾಗಿದ್ದು ಯಾವುದೋ ಯುಧ್ಧದಲ್ಲಿ ಸೋತ ಅವರಿಗೆ ಉಪರತಿ ಉಂಟಾಗಿ ಹರಿ ಭಕ್ತರಾದರಂತೆ. ಕನಕದಾಸರ ಊರು ಕಾಗಿನೆಲೆ (ಈಗ ಹಾವೇರಿ ಜಿಲ್ಲೆಯಲ್ಲಿದೆ). ಕನಕದಾಸರ ಕೀರ್ತನೆಗಳು ಕಾಗಿನೆಲೆಯ ಕೇಶವನಿಗೆ ಅರ್ಪಿತವಾಗಿರುವುದನ್ನು ಗಮನಿಸಬಹುದು. ಜನಪ್ರಿಯ ನ೦ಬಿಕೆಯ೦ತೆ, ಕನಕದಾಸರು ಕುರುಬ ವ೦ಶಕ್ಕೆ ಸೇರಿದವರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು.
ವ್ಯಾಸರಾಯದಿ೦ದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊ೦ಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಭಕ್ತರು. ಅನೇಕರ ನ೦ಬಿಕೆಯ೦ತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದಾದಾಗ ದೇವಸ್ಥಾನದ ಹಿ೦ದೆ ನಿ೦ತು ಹಾಡತೊಡಗಿದರ೦ತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಹಿ೦ದುಗಡೆಯ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತ೦ತೆ (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿ೦ದುಗಡೆಯ ಗೋಡೆಯಲ್ಲಿ ಬಿರುಕನ್ನು ಕಾಣಬಹುದು - ಇಲ್ಲಿ ಒ೦ದು ಕಿಟಕಿಯನ್ನು ನಿರ್ಮಿಸಿ ಕನಕನ ಕಿ೦ಡಿ ಎ೦ದು ಕರೆಯಲಾಗಿದೆ).

ಸಾಹಿತ್ಯ

ಕನಕದಾಸರು ಸುಮಾರು ೨೦೦ ಕೀರ್ತನೆಗಳನ್ನು ರಚಿಸಿ ಹಾಡಿದ್ದಾರೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:
  • ಮೋಹನತರ೦ಗಿಣಿ
  • ನಳಚರಿತ್ರೆ
  • ರಾಮಧಾನ್ಯಚರಿತೆ
  • ಹರಿಭಕ್ತಿಸಾರ
  • ನೃಸಿ೦ಹಸ್ತವ (ಉಪಲಬ್ದವಿಲ್ಲ)

ಕನಕದಾಸರ ಒ೦ದು ಕೀರ್ತನೆ

ಕನಕದಾಸರ ಕಾವ್ಯದ ಸರಾಗತೆಗೆ ಒ೦ದು ಉದಾಹರಣೆ:
ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೊ
ಬಯಲು ಆಲಯದೊಳಗೊ, ಆಲಯವು ಬಯಲೊಳೊಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗ೦ಧವೊ, ಗ೦ಧದೊಳು ಕುಸುಮವೊ
ಕುಸುಮ ಗ೦ಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿ ಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ



ಕೆ. ಶಿವರಾಮ ಕಾರಂತ


ಸ್ವ-ವಿವರ
ಕಾವ್ಯನಾಮ :ಶಿವರಾಮ ಕಾರಂತ.
ನಿಜನಾಮ/ಪೂರ್ಣನಾಮ :ಕೋಟ ಶಿವರಾಮ ಕಾರಂತ.
ಜನನ :೧೯೦೨ ಅಕ್ಟೋಬರ್ ೧೦.
ಮರಣ :೧೯೯೭
ತಂದೆ :ಶೇಷ ಕಾರಂತ.
ತಾಯಿ:ಲಕ್ಷ್ಮಮ್ಮ
ಜನ್ಮ ಸ್ಥಳ :ದಕ್ಷಿಣ ಕನ್ನಡ ಜಿಲ್ಲೆಯ ಕೋಟ.
ಮನೆ, ಮನೆತನ :ವೈದಿಕ
ಪತ್ನಿ :ಲೀಲಾ
ಮಕ್ಕಳು :ಉಲ್ಲಾಸ, ಹರ್ಷ. ಕ್ಷಮಾರಾವ್.
ವಿದ್ಯಾಭ್ಯಾಸ :
ಪ್ರಾಥಮಿಕ :ಕೋಟ.
ಪ್ರೌಢಶಾಲೆ :ಕುಂದಾಪುರ.
ಕಾಲೇಜು :ಮಂಗಳೂರು.
ಪದವಿ:೧೯೩೫ ರಲ್ಲಿ ಎಂ. ಎ. ಪದವಿ.
ವೃತ್ತಿ:
ವಸಂತ ಮತ್ತು ವಿಚಾರವಾಣಿ ಎಂಬ ಪತ್ರಿಕೆಗಳನ್ನು ನಡೆಸಿದರು.
ಮಕ್ಕಳಿಗಾಗಿ ಬಾಲವನವನ್ನು ಸ್ಥಾಪಿಸಿದರು.
ಸಾಹಿತ್ಯಕೃತಿಗಳು :
ಸಣ್ಣಕಥೆಗಳು:ತೆರೆಯ ಮರೆಯಲ್ಲಿ, ಹಸಿವು ಮತ್ತು ಹಾವು.
ಕಥನಕವನಗಳು:ಅದ್ಭುತ ಜಗತ್ತು, ಸಿರಿಗನ್ನಡ ಶಬ್ದಕೋಶ, ಕಿರಿಯರ ವಿಶ್ವಕೋಶ,
ವಿಜ್ಞಾನ ಪ್ರಪಂಚ ೪ ಸಂಪುಟಗಳು, ಬಾಲಪ್ರಪಂಚ,
ಯಕ್ಷಗಾನ ಬಯಲಾಟ.
ಕಾದಂಬರಿ :ವಿಚಿತ್ರ ಕೂಟ-ಪ್ರಥಮ ಕಾದಂಬರಿ, ಮರಳಿ ಮಣ್ಣಿಗೆ, 
ಮೂಕಜ್ಜಿಯ ಕನಸುಗಳು, ಬೆಟ್ಟದ ಜೀವ, ಚೋಮನ ದುಡಿ,
ಸರಸಮ್ಮನ ಸಮಾಧಿ, ಮೈ ಮನಗಳ ಸುಳಿಯಲಿ,
ಬತ್ತದ ಹೊರೆ, ಗೆದ್ದವರ ದೊಡ್ಡಸ್ತಿಕೆ, ಸ್ವಪ್ನದ ಹೊಳೆ,
 ಒಂಟಿ ದನಿ, ಅಳಿದ ಮೇಲೆ, ಗೊಂಡಾರಣ್ಯ.
ಕವನ ಸಂಕಲನಗಳು :ರಾಷ್ಟ್ರಗೀತ ಸುಧಾಕರ ಇವರ ಮೊದಲ ಸಂಕಲನ.ಸೀಳ್ಗವನಗಳು
ನಾಟಕಗಳು :ಕಿಸಾಗೋತಾಮೀ, ಸೋಮಿಯ ಸೌಭಾಗ್ಯ, ಸಾವಿತ್ರಿ-
ಸತ್ಯವಾನ-ಗೀತ ನಾಟಕ.ಗರ್ಭಗುಡಿ, ನಿಮ್ಮಓಟು ಯಾರಿಗೆ,
ಕಟ್ಟೆಪುರಾಣ, ಗೆದ್ದವರ ಸಂಖ್ಯೆ.
ಪ್ರವಾಸ ಕಥನ:ಅಬೂವಿನಿಂದ ಬರ್ಮಾಕ್ಕೆ, ಅಪೂರ್ವ ಪಶ್ಚಿಮ, ಪಾತಾಲಕ್ಕೆ ಪಯಣ,
ದಕ್ಷಿಣ ಹಿಂದೂಸ್ಥಾನ
ಆತ್ಮಚರಿತ್ರೆ:ಹುಚ್ಚುಮನಸ್ಸಿನ ಹತ್ತು ಮುಖಗಳು.
ಪ್ರಬಂಧ :ಮೈಗಳ್ಳತನ ದಿನಚರಿಯಿಂದ, ಮೈಲಿಗಲ್ಲಿನೊಡನೆ ಮಾತುಕತೆ.
ಸಂಪಾದಿತಕೃತಿಗಳು :
ವಿಮರ್ಶಾ ಗ್ರಂಥಗಳು :
ಅನುವಾದಿತ ಕೃತಿಗಳು :
ಪ್ರಶಸ್ತಿ, ಪುರಸ್ಕಾರ, ಬಿರುದು:
೧೯೨೨ರಲ್ಲಿ ಇಂದಿರಾಗಾಂಧಿ ಪರ್ಯಾವರಣ ಪುರಸ್ಕಾರ 'ಪರಿಸರ ಪ್ರೇಮಿ' ಪ್ರಶಸ್ತಿ ಸಿಕ್ಕಿತು.
೧೯೭೮ರಲ್ಲಿ ಮೂಕಜ್ಜಿಯ ಕನಸುಗಳು ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆಯಿತು.
೧೯೫೯ರಲ್ಲಿ ಯಕ್ಷಗಾನ ಬಯಲಾಟ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
೧೯೮೯ರಲ್ಲಿ ಮೈ ಮನಗಳ ಸುಳಿಯಲಿ ಕಾದಂಬರಿಗೆ ರಾಜ್ಯ ಸರ್ಕಾರದ ಪಂಪ ಪ್ರಶಸ್ತಿ ದೊರೆಯಿತು.
ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿ.
ಕರ್ನಾಟಕ, ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ.
೧೯೫೫ ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕಾರಂತರ ಕುರಿತು ಪ್ರಕಟಿತ ಪ್ರಮುಖ ಲೇಖನಗಳು :
ಕಾರಂತ ಮಂಥನ, ಕಾರಂತ ಪ್ರಪಂಚ, ಅಭಿವಂದನಾ.

ಜಿ.ಎಸ್.ಶಿವರುದ್ರಪ್ಪ


ಜಿ ಎಸ್ ಶಿವರುದ್ರಪ್ಪ - (ಜನನ:ಫೆಬ್ರುವರಿ ೭,೧೯೨೬) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಗೋವಿಂದ ಪೈಕುವೆಂಪುನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.

ಪ್ರವೃತ್ತಿ

ಸುಮಾರು ಐದೂವರೆ ದಶಕಗಳಿಂದ ಕಾವ್ಯ ಕೃಷಿ ಮಾಡುತ್ತಿರುವ ಶಿವರುದ್ರಪ್ಪ,ಕವಿ ಮಾತ್ರವಲ್ಲ,ಬರಹಗಾರ,ವಿಮರ್ಶಕ,ವಿಶ್ಲೇಷಕ ಹಾಗೂ ನವೋದಯ ಮತ್ತು ನವ್ಯ ಪ್ರಕಾರಗಳೆರಡರಲ್ಲೂ ಕಾವ್ಯ ರಚನೆ ಮಾಡಿರುವ ಸಮರ್ಥರು.
ಜಿ.ಎಸ್. ಶಿವರುದ್ರಪ್ಪನವರು ಅನೇಕ ಭಾವಗೀತೆಗಳನ್ನೂ ರಚಿಸಿದ್ದು,'ಉಡುಗಣ ವೇಷ್ಟಿತ', 'ಎದೆ ತುಂಬಿ ಹಾಡಿದೆನು ಅಂದು ನಾನು', 'ಹಾಡು ಹಳೆಯದಾದರೇನು? ಭಾವ ನವನವೀನ', 'ಎಲ್ಲೋ ಹುಡುಕಿದೆ ಇಲ್ಲದ ದೇವರ', 'ವೇದಾಂತಿ ಹೇಳಿದನು' ಮುಂತಾದವು ಅವರ ಅತ್ಯಂತ ಜನಪ್ರಿಯವಾಗಿರುವ ಭಾವಗೀತೆಗಳಾಗಿವೆ. ಶಿವರುದ್ರಪ್ಪನವರ ಪ್ರಥಮ ಒಲವು ಕವಿತೆ,ನಂತರ ಸಾಹಿತ್ಯಿಕ ವಿಮರ್ಶೆ.ಆದರೆ ಅವರಿಗೆ ೧೯೮೪ರಲ್ಲಿ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಪ್ರಶಸ್ತಿ ತಂದುಕೊಟ್ಟದ್ದು ಅವರ ಗದ್ಯ ಕೃತಿ "ಕಾವ್ಯಾರ್ಥ ಚಿಂತನ".

ಓದು,ವಿದ್ಯಾಭ್ಯಾಸ

ಡಾ.ಜಿ.ಎಸ್.ಶಿವರುದ್ರಪ್ಪನವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಫೆಬ್ರುವರಿ ೭,೧೯೨೬ ರಂದು ಜನಿಸಿದರು. ತಂದೆ ಶಾಲಾ ಉಪಾಧ್ಯಾಯರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿ.ಎ. ಆನರ್ಸ್ (೧೯೪೯); ಎಂ.ಎ. (೧೯೫೩) ಪ್ರಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.೧೯೬೫ರಲ್ಲಿ ತಮ್ಮ ಗುರುಗಳಾದ ಕುವೆಂಪುರವರ ಮಾರ್ಗದರ್ಶನದಲ್ಲಿ ಬರೆದ 'ಸೌಂದರ್ಯ ಸಮೀಕ್ಷೆ' ಎಂಬ ಗ್ರಂಥಕ್ಕೆ ಪಿಹೆಚ್‌ಡಿ ಪದವಿ ಪಡೆದರು.

ವೃತ್ತಿ ಜೀವನ

ತಾವು ಓದಿದ ಮೈಸೂರು ವಿಶ್ವವಿದ್ಯಾಲಯದಲ್ಲೇ ೧೯೪೯ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು ೧೯೬೩ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ ಹೋಗಿ ೧೯೬೬ರ ವರೆವಿಗೂ ಅಲ್ಲಿ ಸೇವೆ ಸಲ್ಲಿಸಿದರು. ೧೯೬೬ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ ೧೯೮೭ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು.


ಜಿ.ಎಸ್.ಶಿವರುದ್ರಪ್ಪ ಅವರ ಕೃತಿಗಳು

ಜಿ.ಎಸ್.ಶಿವರುದ್ರಪ್ಪ ಅವರ ಕವಿತೆಯೊಂದರ ತುಣುಕು...
ಕಂಡೆ ಗೊಮ್ಮಟನಾಗಿ ನಿಂತಿದ್ದ ಮಹಾಮೂರ್ತಿ
ಕರಗಿ ಕೊಚ್ಚೆಯಾಗಿ ಹರಿದಿದ್ದ ಕಂಡೆ
ಇಂದ್ರನೈರಾವತಕ್ಕೆ ತೊಣಚಿ ಹತ್ತಿ
ಬೀದಿ ನಾಯಾಗಿ ಬೀದಿಯಲ್ಲಿ ಹೊರಳಾಡಿದ್ದ ಕಂಡೆ.
ನಿಗಿ ನಿಗಿ ಉರಿದ ಉಜ್ವಲವಾದ ಮಾತೆಲ್ಲ
ಬರೀ ಬೂದಿಯಾಗಿ ತೆಪ್ಪಗಾದದ್ದ ಕಂಡೆ


ಕವನ ಸಂಕಲನಗಳು

  • ಸಾಮಗಾನ
  • ಚೆಲುವು-ಒಲವು
  • ದೇವಶಿಲ್ಪಿ
  • ದೀಪದ ಹೆಜ್ಜೆ
  • ಅನಾವರಣ
  • ತೆರೆದ ಬಾಗಿಲು
  • ಗೋಡೆ
  • ವ್ಯಕ್ತಮಧ್ಯ
  • ತೀರ್ಥವಾಣಿ
  • ಕಾರ್ತಿಕ
  • ಕಾಡಿನ ಕತ್ತಲಲ್ಲಿ
  • ಪ್ರೀತಿ ಇಲ್ಲದ ಮೇಲೆ
  • ಚಕ್ರಗತಿ

ವಿಮರ್ಶೆ/ಗದ್ಯ

  • ಪರಿಶೀಲನ
  • ವಿಮರ್ಶೆಯ ಪೂರ್ವ ಪಶ್ಚಿಮ
  • ಸೌಂದರ್ಯ ಸಮೀಕ್ಷೆ(ಇದು ಅವರ ಪಿಹೆಚ್‌ಡಿ ಪ್ರಬಂಧ)
  • ಕಾವ್ಯಾರ್ಥ ಚಿಂತನ
  • ಗತಿಬಿಂಬ
  • ಅನುರಣನ
  • ಪ್ರತಿಕ್ರಿಯೆ
  • ಕನ್ನಡ ಸಾಹಿತ್ಯ ಸಮೀಕ್ಷೆ
  • ಮಹಾಕಾವ್ಯ ಸ್ವರೂಪ
  • ಕನ್ನಡ ಕವಿಗಳ ಕಾವ್ಯಕಲ್ಪನೆ
  • ಹೊಸಗನ್ನಡ ಕವಿತೆಗಳಲ್ಲಿ ಕಾವ್ಯ ಚಿಂತನ
  • ಕುವೆಂಪು : ಪುನರವಲೋಕನ
  • ಸಮಗ್ರ ಗದ್ಯ ಭಾಗ ೧, ೨ ಮತ್ತು ೩
ಇವಿಷ್ಟೇ ಅಲ್ಲದೆ ಸರ್ಕಾರಕ್ಕಾಗಿ "Kuvempu-a Reappraisal" ಎಂಬ ಗ್ರಂಥವನ್ನು ಬರೆದಿದ್ದಾರೆ.


ಪ್ರವಾಸಕಥನ

  • ಮಾಸ್ಕೋದಲ್ಲಿ ೨೨ ದಿನ(ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ)
  • ಇಂಗ್ಲೆಂಡಿನಲ್ಲಿ ಚತುರ್ಮಾಸ
  • ಅಮೆರಿಕದಲ್ಲಿ ಕನ್ನಡಿಗ
  • ಗಂಗೆಯ ಶಿಖರಗಳಲ್ಲಿ

  • ಶಸ್ತಿ/ಪುರಸ್ಕಾರಗಳು
  • ಕೇಂದ್ರ ಸಾಹಿತ್ಯ ಅಕಾಡೆಮಿ-೧೯೮೪
  • ಪಂಪ ಪ್ರಶಸ್ತಿ
  • ಸೋವಿಯತ್‌ಲ್ಯಾಂಡ್ ನೆಹರೂ ಪ್ರಶಸ್ತಿ-೧೯೭೩
  • ದಾವಣಗೆರೆಯಲ್ಲಿ ನಡೆದ ೬೧ನೇ ಅಖಿಲ-ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ
  • ರಾಷ್ಟ್ರಕವಿ ಪುರಸ್ಕಾರ-೨೦೦೬
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ೧೯೮೨
  • ನಾಡೋಜ ಕನ್ನಡ ವಿಶ್ವವಿದ್ಯಾಲಯ
  • ಗೌರವ ಡಾಕ್ಟರೇಟ್ : ಬೆಂಗಳೂರು ವಿ.ವಿ. ಮತ್ತು ಕುವೆಂಪು ವಿ.ವಿ.

ರತ್ನಾಕರ ವರ್ಣಿ



ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬನಾದ ರತ್ನಾಕರವರ್ಣಿಯ ಕಾಲ ಸುಮಾರು ಕ್ರಿ.ಶ. ೧೫೫೭. ಈತನ ತಂದೆ ದೇವರಾಜ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಈತನ ಜನ್ಮಸ್ಥಳ. ರತ್ನಾಕರವರ್ಣಿಯು ವಿಜಯನಗರದ ಅರಸರ ಸಾಮಂತರಾಜನಾದ ಕಾರ್ಕಳದ ಭೈರರಾಜನ ಆಸ್ಥಾನದಲ್ಲಿದ್ದ ಕವಿ.
ರತ್ನಾಕರವರ್ಣಿ ರಚಿಸಿದ ಕೃತಿಗಳು:
  • ಭರತೇಶ ವೈಭವ - ರತ್ನಾಕರವರ್ಣಿಯ ಮೇರು ಕೃತಿ.
  • ತ್ರಿಲೋಕ ಶತಕ
  • ಅಪರಾಜಿತೇಶ್ವರ ಶತಕ
  • ರತ್ನಾಕರಾಧೀಶ್ವರ ಶತಕ
  • ಸೋಮೇಶ್ವರ ಶತಕ (ಕೆಲ ವಿದ್ವಾಂಸರ ಪ್ರಕಾರ ರತ್ನಾಕರವರ್ಣಿಯು ಈ ಕೃತಿಯನ್ನು ತನ್ನ ಬದುಕಿನ ಸಂದಿಗ್ಧ ಘಟ್ಟವೊಂದರಲ್ಲಿ ಮತಾಂತರಗೊಂಡಾಗ ರಚಿಸಿದ್ದಾನೆ)
  • ಅಣ್ಣನ ಪದಗಳು

ಭರತೇಶ ವೈಭವವು ಹಳೆಗನ್ನಡ ಸಾಹಿತ್ಯದ ಒಂದು ಶ್ರೇಷ್ಠ ಕೃತಿ. ಇದು ರತ್ನಾಕರವರ್ಣಿಯ ಮೇರು ಕೃತಿ. ಹಳೆಗನ್ನಡದ ಕವಿಗಳು ಛಂದಸ್ಸುಗಳಲ್ಲಿ ತೋಯ್ದ ಘನವಾದ ಕೃತಿಗಳನ್ನು ರಚಿಸುತ್ತಿದ್ದ ಕಾಲದಲ್ಲಿ ರತ್ನಾಕರವರ್ಣಿಯು ಸಾಂಗತ್ಯರೂಪದಲ್ಲಿ ಭರತೇಶ ವೈಭವವನ್ನು ರಚಿಸಿ ಕನ್ನಡ ಕಾವ್ಯದ ಹೊಸ ಶಕೆಯೊಂದಕ್ಕೆ ನಾಂದಿ ಹಾಡುತ್ತಾನೆ.

ಮಾಸ್ತಿ ವೆಂಕಟೇಶ ಅಯ್ಯಂಗಾರ್

 



ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬) - ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.


ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್ ಎ (೧೯೦೯), ಬಿ ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ,೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ೧೯೪೩ ರವವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣ ಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ.
೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬೧೯೮೬ ರಂದು ನಿಧನ ಹೊಂದಿದರು.

ಜೀವನ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಹಳ್ಳಿಯಲ್ಲಿ ೧೮೯೧ರ ಜೂನ್ ೬ರಂದು ಹುಟ್ಟಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ "ಪೆರಿಯಾತ್" ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ. ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ. ಮಾಡಿಕೊಂಡು ಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು. ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು

ಸಾಹಿತ್ಯ

೧೯೧೦ ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ 'ಮಾತುಗಾರ ರಾಮಣ್ಣ' ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩. ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, "ಜೀವನ" ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ.
೨೦ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು. ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಅವರ ಒಂದು ಸಣ್ಣ ಕಥೆಯನ್ನು ರಾಜಾಜಿಯವರು ತಮಿಳಿಗೆ ಅನುವಾದಿಸಿದರು. ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳಿಗೆ ಮಾಸ್ತಿ ಅವರ ಸಣ್ಣ ಕತೆಗಳು ಅನುವಾದಗೊಂಡಿವೆ. ದೂರದರ್ಶನದಲ್ಲಿ ಕೆಲವು ಕತೆಗಳು ಅಭಿನಯಿಸಲ್ಪಟ್ಟು ಪ್ರಸಾರವಾಗಿವೆ. ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ. ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. "ಸುಬ್ಬಣ್ಣ" ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು.
ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. "ಭಾರತತೀರ್ಥ", "ಆದಿಕವಿ ವಾಲ್ಮೀಕಿ" ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ "ಶ್ರೀರಾಮ ಪಟ್ಟಾಭಿಷೇಕ" ಅವರ ಒಂದು ಕಾವ್ಯ. ರವೀಂದ್ರನಾಥ ಠಾಕೂರ್ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆಗಳನ್ನೂ, ಪುರಂದರದಾಸಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್‌ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ.
ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ - ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು "ಚನ್ನಬಸವನಾಯಕ".
"ಭಾವ" - ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.


ಗೌರವಗಳು

ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ. ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು. ೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು. ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು ಗೌರವಿಸಿದ್ದರು. ೧೯೭೨ರಲ್ಲಿ "ಶ್ರೀನಿವಾಸ" ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.
ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು.


ಮುಖ್ಯ ಕೃತಿಗಳು


ಸಣ್ಣ ಕತೆಗಳ ಸಂಗ್ರಹ

  • ಸಣ್ಣ ಕತೆ

ನೀಳ್ಗತೆ

ಜೀವನ ಚರಿತ್ರೆ


ಪ್ರಬಂಧ

ನಾಟಕ

ಕಾದಂಬರಿ

ಈ ಪುಟಗಳನ್ನೂ ನೋಡಿ


ಪ್ರಶಸ್ತಿಗಳು