welcome to lavalavika


I made this widget at MyFlashFetish.com.

Friday, December 24, 2010

ಕೆ.ಪಿ. ಪೂರ್ಣಚಂದ್ರ ತೇಜಸ್ವಿ


ಕೆ.ಪಿ. ಪೂರ್ಣಚಂದ್ರ ತೇಜಸ್ವಿ(೧೯೩೮ ಸೆಪ್ಟೆಂಬರ್ ೮ - ೨೦೦೭ ಏಪ್ರಿಲ್ ೫) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರೂ ಒಬ್ಬರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು.

ಜೀವನ


ತಂದೆ ಪುಟ್ಟಪ್ಪ ಮತ್ತು ತಾಯಿಯ ಜೊತೆ ತೇಜಸ್ವಿ






















ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ಇವರು ೧೯೩೮ ಸೆಪ್ಟೆಂಬರ್ ೮ ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ಜನಿಸಿದರು. ಸಾಹಿತ್ಯದ ಜೊತೆಗೆ ಇವರಿಗೆ ವ್ಯವಸಾಯಛಾಯಾಚಿತ್ರಗ್ರಹಣ ಹಾಗು ಬೇಟೆಯಲ್ಲಿ ಆಸಕ್ತಿಯಿತ್ತು. ಇವರು ರೈತ ಚಳುವಳಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಸಾಹಿತ್ಯ
ಇವರು ತಮ್ಮ ಮಲೆನಾಡು ಜೀವನದ ಅನುಭವದಿಂದ ಬರೆದ ಕೃತಿಗಳು 'ಪರಿಸರದ ಕಥೆ' ಮತ್ತು 'ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು'.ಕವಿತೆ, ನಾಟಕ, ಕಾದಂಬರಿ, ಕತೆ ಮೊದಲಾದ ಸಾಹಿತ್ಯಕ ಪ್ರಕಾರಗಳಲ್ಲಿ ಲೇಖನಿ ಓಡಿಸಿದ್ದಾರೆ. "ಬೃಹನ್ನಳೆ ಸೋಮುವಿನ ಸ್ವಗತಲಹರಿ ಮತ್ತು ಇತರ ಕವನಗಳು" ಇವರ ಕವನ ಸಂಕಲನ. "ಅಬಚೂರಿನ ಪೋಸ್ಟಾಫೀಸು", "ಹುಲಿಯೂರಿನ ಸರಹದ್ದು","ಕಿರಗೂರಿನ ಗಯ್ಯಾಳಿಗಳು" ಇವರ ಕಥಾ ಸಂಗ್ರಹಗಳು. "ಚಿದಂಬರ ರಹಸ್ಯ", "ಕರ್ವಾಲೋ", "ಜುಗಾರಿ ಕ್ರಾಸ್", "ಮಾಯಾಲೋಕ-೧" ಇವರ ಕಾದಂಬರಿಗಳು. "ವ್ಯಕ್ತಿ ವಿಶಿಷ್ಟ ಸಿದ್ಧಾಂತ", ತೇಜಸ್ವಿ ಅವರ ಒಂದು ಚಿಂತನ ಮಂಥನ ವೈಚಾರಿಕ ಕೃತಿ.
ಹಲವಾರು ಆಂಗ್ಲ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇದರಲ್ಲಿ ಕೀಟಗಳು, ಪ್ರಾಣಿಗಳು, ನದಿ-ಕೊಳ್ಳಗಳು, ಕಾಡುಗಳು, ಬೇಟೆಯ ವೈವಿಧ್ಯತೆಯ ಬಗ್ಗೆ ಹಲವಾರು ಕೃತಿಗಳನ್ನು ನೀಡಿದ್ದಾರೆ. ಇವರ "ಕರ್ವಾಲೋ" ಕೃತಿಯಲ್ಲಿ, ಜೀವವಿಕಾಸ ಪಥದಲ್ಲಿ ಎಲ್ಲವೂ ಬದಲಾಗುತ್ತ ರೂಪಾಂತರ ಹೊಂದುತ್ತಾ ಬಂದಿರುವಾಗ ಹಾರುವ ಓತಿಯ ಕುರಿತು ಕುತೂಹಲ ಹುಟ್ಟಿಸುವ ಸನ್ನಿವೇಶಗಳು ಮೂಡಿ ಬಂದಿವೆ.
ಶುಧ್ಧ ಸಾಹಿತ್ಯಿಕ ಮೌಲ್ಯ ಉಳ್ಳ ಕಥೆ ಕಾದಂಬರಿಗಳ ಸಂಗಡ ತೇಜಸ್ವಿಯವರು ಹಲವಾರು ವೈಜ್ಞಾನಿಕ ಹಾಗು ಐತಿಹಾಸಿಕ ಲೇಖನ ಸಂಕಲನಗಳನ್ನು ಕನ್ನಡಕ್ಕೆ ತಂದಿದ್ದಾರೆ. ಮಹಾಯುಧ್ಧ, ಹಾರುವ ತಟ್ಟೆಗಳು, ಮಹಾನದಿ ನೈಲ್ ಇತ್ಯಾದಿ.
ಅಲೆಮಾರಿಯ ಅಂಡಮಾನ್ ತೇಜಸ್ವಿಯವರ ಅಂಡಮಾನ್ ಪ್ರವಾಸ ಕಥನ. ಈ ಕೃತಿಯು ಕನ್ನಡ ಪ್ರವಾಸ ಕಥನಗಳಲ್ಲೇ ವಿಶಿಷ್ಠ ಸ್ಥಾನವನ್ನು ಪಡೆದುಕೊಂಡಿದೆ.

ಗೌರವ, ಪ್ರಶಸ್ತಿಗಳು

ಪೂರ್ಣಚಂದ್ರ ತೇಜಸ್ವಿ ಅವರು ಬರೆದಿರುವ "ಅಬಚೂರಿನ ಪೋಸ್ಟಾಫೀಸು", "ತಬರನ ಕಥೆ" ಕೃತಿಗಳು ಚಲನಚಿತ್ರಗಳಾಗಿ ಪ್ರಶಸ್ತಿ ಗಳಿಸಿವೆ. "ಕುಬಿ ಮತ್ತು ಇಯಾಲ" ಚಿತ್ರವು ರಾಷ್ಟ್ರ ಪ್ರಶಸ್ತಿ ಗಳಿಸಿತು. "ಚಿದಂಬರ ರಹಸ್ಯ" ಪತ್ತೇದಾರಿ ವಿಧಾನದ ವಸ್ತು ಹೊಂದಿದ್ದು ಈ ಕಾದಂಬರಿಗೆ ವರ್ಷದ ಉತ್ತಮ ಕೃತಿ ಬಹುಮಾನ ದೊರೆತುದಲ್ಲದೆ, ೧೯೮೭ರಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಾಪ್ತವಾಯಿತು. ಕರ್ನಾಟಕ ಸಾಹಿತ್ಯ ಅಕಾಡಮಿಯೂ ಸಹ ಅದೇ ವರ್ಷ ತೇಜಸ್ವಿ ಅವರಿಗೆ ಗೌರವ ಪ್ರಶಸ್ತಿ ನೀಡಿದೆ.
ನಾಲ್ಕು ದಶಕಗಳ ಕಾಲ ಕಥೆ, ಕಾದಂಬರಿಗಳ ಮೂಲಕ, ವಿಜ್ಞಾನದ ವಿಸ್ಮಯಗಳ ಮೂಲಕ ತೇಜಸ್ವಿಯವರು ಕನ್ನಡ ಸಾಹಿತ್ಯಕ್ಕೆ ಆನೇಕ ಮಹತ್ವಪೂರ್ಣ ಕೃತಿಗಳನ್ನು ನೀಡಿದ್ದಾರೆ.
ಕೃತಿಗಳು

    No comments:

    Post a Comment