welcome to lavalavika


I made this widget at MyFlashFetish.com.

Sunday, December 19, 2010

ಎಂ. ಚಿದಾನಂದ ಮೂರ್ತಿ


ಎಂ. ಚಿದಾನಂದ ಮೂರ್ತಿ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ. ಇವರ "ಹೊಸತು ಹೊಸತು" ಎಂಬ ಕೃತಿಗೆ ೧೯೯೭ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಚಿದಾನಂದಮೂರ್ತಿಯವರು ಶಿವಮೊಗ್ಗ ಜಿಲ್ಲೆಯ ಹಿರೋಕೋಗಲೂರು ಎಂಬ ಗ್ರಾಮದಲ್ಲಿ ೧೯೩೧ರ ಮೇ ೧೦ ರಂದು ಜನಿಸಿದರು. ಎಮ್.ಎ. ಪದವಿ ಹಾಗು ಪಿ.ಎಚ್.ಡಿ ಪದವಿಗಳನ್ನು ಸಂಪಾದಿಸಿ ಮೊದಲು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕ ವೃತ್ತಿ ಹಿಡಿದವರು. ನಂತರ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದು ಸ್ವಇಚ್ಛೆಯಿಂದ ನಿವೃತ್ತರಾದರು. ಕೆಲ ಕಾಲ ಅಮೆರಿಕದ ಚಿಕಾಗೊ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು.
ಚಿದಾನಂದಮೂರ್ತಿಯವರು ಅನೇಕ ಸಂಶೋಧನಾ ಗ್ರಂಥಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಕೆಲವು ಇಂತಿವೆ: ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ, ಶೂನ್ಯಸಂಪಾದನೆಯನ್ನು ಕುರಿತು, ಭಾಷಾವಿಜ್ಞಾನದ ಮೂಲತತ್ವಗಳು, ಸಂಶೋಧನ ತರಂಗ, ಕನ್ನಡ ಸಂಸ್ಕೃತಿ-ನಮ್ಮ ಹೆಮ್ಮೆ, ಪೂರ್ಣ ಸೂರ್ಯಗ್ರಹಣ, ವೀರಗಲ್ಲುಗಳು ಮತ್ತು ಮಾಸ್ತಿಕಲ್ಲುಗಳು, ಗ್ರಾಮೀಣ. "ಕನ್ನಡ ಸಂಸ್ಕೃತಿ-ನಮ್ಮ ಹೆಮ್ಮೆ" ಈ ಗ್ರಂಥವು ಒಂಬತ್ತು ಭಾಷೆಗಳಿಗೆ ಅನುವಾದವಾಗಿದೆ.
ಚಿದಾನಂದಮೂರ್ತಿಯವರು ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಹಾಗು ಇನ್ನೂರೈವತ್ತಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಕನ್ನಡಕ್ಕೆ ನೀಡಿದ್ದಾರೆ. ಇವರ ಆರು ಕೃತಿಗಳು ಬಹುಮಾನಿತವಾಗಿವೆ. ಐವತ್ತಕ್ಕು ಹೆಚ್ಚು ರಾಷ್ಟ್ರೀಯ ಹಾಗು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಕನ್ನಡ ನಿಘಂಟು ಸಂಪಾದಕ ಸಮಿತಿಯ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಚಳುವಳಿ ಅಥವಾ ವಿಷಯಗಳಲ್ಲಿ ಹೋರಾಟಕ್ಕಿಳಿದಿದ್ದಾರೆ ಹಾಗು ತಮ್ಮ ಅಭಿಪ್ರಾಯಗಳನ್ನು ನಿರ್ದಾಕ್ಷಿಣ್ಯವಾಗಿ ನೀಡುತ್ತಿರುತ್ತಾರೆ.

No comments:

Post a Comment