welcome to lavalavika


I made this widget at MyFlashFetish.com.

Tuesday, January 25, 2011

ಗಣರಾಜ್ಯೋತ್ಸವ

ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ ೨೬ ರ೦ದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸ೦ವಿಧಾನ ಜಾರಿಗೆ ಬ೦ದು ಭಾರತ ಗಣರಾಜ್ಯವಾದದ್ದು ಜನವರಿ ೨೬, ೧೯೫೦ ರ೦ದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯ೦ತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು೦ಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಪೆರಿ ನಡೆಯುತ್ತದೆ.

ಇತಿಹಾಸ

ಆಗಸ್ಟ್ ೧೫ ೧೯೪೭ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ ೨೯ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಕರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ ೪ ೧೯೪೭ರಂದು ಶಾಸನಸಭೆಯಲ್ಲಿ ಮಂಡಿಸಿತು. ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ ೨೬ ೧೯೫೦ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತ೦ತ್ರ್ಯ ಚಳುವಳಿಯಲ್ಲಿ ಜನವರಿ ೨೬, ೧೯೩೦ ರ೦ದು ಭಾರತ ರಾಷ್ಟ್ರೀಯ ಕಾ೦ಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊ೦ಡಿತ್ತು. ಲಾಹೋರ್ನಲ್ಲಿ ನಡೆದ ಕಾ೦ಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊ೦ಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎ೦ದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತ೦ತ್ರ್ಯಾನ೦ತರ ಭಾರತದ ಸ೦ವಿಧಾನವನ್ನು ಈ ದಿನದ೦ದೇ ಜಾರಿಗೆ ತರಲಾಯಿತು.

ಮುಖ್ಯ ಅತಿಥಿ

ಈ ದಿನದಂದು ಭಾರತವು ಇತರ ದೇಶಗಳ ನಾಯಕರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುತ್ತದೆ.
ವರ್ಷ ಮುಖ್ಯ ಅತಿಥಿ ದೇಶ
೧೯೫೦ ಅಧ್ಯಕ್ಷರು ಸುಕಾರ್ನೊ ಇ೦ಡೋನೇಷ್ಯಾ
೧೯೫೪ ಕಿ೦ಗ್ ಜಿಗಮೆ ದೊರ್ಜಿ ವಾ೦ಗಚಕ್ ಭೂತಾನ್
೧೯೫೫ ಗವನ೯ರ್ ಜನರಲ್ ಮಲ್ಲಿಕ್ ಗುಲಾಮ್ ಮೊಹಮ್ಮದ್ ಪಾಕಿಸ್ತಾನ
೧೯೫೮ ಮಾಷ೯ಲ್ ಯೆ ಜಿನ್ ಯಿ೦ಗ್ ಚೀನಾ
೧೯೬೦ ಪ್ರಧಾನ ಮ೦ತ್ರಿ ಕ್ಲೈಮ೦ಟ್ ವೊರೊಸಿಲ್ವೊ ಸೊವಿಯತ್ ಯುನಿಯನ್
೧೯೬೧ ರಾಣಿ ಎಲಿಜಾಬೆತ್ ಯುನ್ಯಟೆಡ್ ಕಿ೦ಗಡಮ್
೧೯೬೩ ಕಿ೦ಗ್ ನೊರೊಡೊಮ್ ಸಿನೌಕ್ ಕಾ೦ಬೊಡಿಯಾ
೧೯೭೬ ಪ್ರಧಾನ ಮಂತ್ರಿ ಜಾಕ್ಸ್ ಚಿರಾಕ್ Flag of France.svg ಫ್ರಾನ್ಸ್
೧೯೭೮ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹಿಲ್ಲರಿ Flag of Ireland.svg ಐರ್ಲ್ಯಾಂಡ್
೧೯೮೬ ಪ್ರಧಾನ ಮಂತ್ರಿ ಆಂಡ್ರಿಯಾಸ್ ಪಪನ್ಡರ್ಯೂ Flag of Greece.svg ಗ್ರೀಸ್
೧೯೯೨ ರಾಷ್ಟ್ರಪತಿ ಮಾರಿಯೊ ಸೋರೆಸ್ Flag of Portugal.svg ಪೋರ್ಚುಗಲ್
೧೯೯೫ ರಾಷ್ಟ್ರಪತಿ ನೆಲ್ಸನ್ ಮಂಡೇಲ[೧] Flag of South Africa.svg ದಕ್ಷಿಣ ಆಫ್ರಿಕ
೧೯೯೬ ರಾಷ್ಟ್ರಪತಿ ಡಾ. ಫರ್ನ್ಯಾನ್ಡೋ ಹೆನ್ರಿಕ್ ಕಾರ್ದೊಸೊ Flag of Brazil.svg ಬ್ರೆಜಿಲ್
೧೯೯೭ ಪ್ರಧಾನ ಮಂತ್ರಿ ಬಸ್ದಿಯೊ ಪಾಂಡೆ Flag of Trinidad and Tobago.svg ಟ್ರಿನಿಡಾಡ್ ಮತ್ತು ಟೊಬೆಗೊ
೧೯೯೮ ರಾಷ್ಟ್ರಪತಿ ಜಾಕ್ಸ್ ಚಿರಾಕ್ Flag of France.svg ಫ್ರಾನ್ಸ್
೧೯೯೯ ರಾಜ ಬೀರೇದ್ರ ಬೀರ್ ಬಿಕ್ರಮ್ ಶಾಹ್ ದೇವ್ Flag of Nepal.svg ನೇಪಾಲ
೨೦೦೦ ರಾಷ್ಟ್ರಪತಿ ಒಲೆಸುಗುನ್ ಒಬಸಾಂಜೊ Flag of Nigeria.svg ನೈಜೀರಿಯ
೨೦೦೧ ರಾಷ್ಟ್ರಪತಿ ಅಬ್ದೆಲ್‌ಅಜೀಜ್ ಬೌತೆಫ್ಲಿಕ Flag of Algeria.svg ಅಲ್ಜೀರಿಯ
೨೦೦೨ ರಾಷ್ಟ್ರಪತಿ ಕಸ್ಸಮ್ ಉತೀಮ್ Flag of Mauritius.svg ಮಾರಿಷಸ್
೨೦೦೩ ರಾಷ್ಟ್ರಪತಿ ಮೊಹಮ್ಮದ್ ಖಾತಾಮಿ Flag of Iran.svg ಇರಾನ್
೨೦೦೪ ರಾಷ್ಟ್ರಪತಿ ಲುಯಿಜ್ ಇನಾಸಿಒ ಲುಲ ಡ ಸಿಲ್ವ Flag of Brazil.svg ಬ್ರೆಜಿಲ್
೨೦೦೫ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ Flag of Bhutan.svg ಭೂತಾನ್
೨೦೦೬ ರಾಜ ಅಬ್ದುಲ್ಲಹ್ ಬಿನ್ ಅಬ್ದುಲ್‌ಅಜೀಜ್ ಅಲ್-ಸೌದ್ Flag of Saudi Arabia.svg ಸೌದಿ ಅರೇಬಿಯ
೨೦೦೭ ರಾಷ್ಟ್ರಪತಿ ವ್ಲಾದಿಮಿರ್ ಪುತಿನ್ Flag of Russia.svg ರಷ್ಯಾ
೨೦೦೮ ರಾಷ್ಟ್ರಪತಿ ನಿಕೊಲಸ್ ಸಾರ್ಕೋಜಿ Flag of France.svg ಫ್ರಾನ್ಸ್
೨೦೦೯ ರಾಷ್ಟ್ರಪತಿ ನೂರ್ಸುಲ್ತಾನ್ ನಜರ್ಬಯೇವ್ Flag of Kazakhstan.svg ಕಜಾಕಸ್ಥಾನ

Saturday, January 22, 2011

ಸುಭಾಷ್ ಚಂದ್ರ ಬೋಸ್

ಸುಭಾಷ್ ಚಂದ್ರ ಬೋಸ್ (সুভাষ চন্দ্র বসু ; ಜನನ: ಜನವರಿ ೨೩೧೮೯೭ — ಮರಣ (ಸಂಭಾವಿತ): ಆಗಸ್ಟ್ ೧೮೧೯೪೫)ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.


ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಅನುಸ್ಥಾಪಿಸಿದರು. ಇವರು ಟೈವಾನ್‍ನಲ್ಲಿ ೧೯೪೫ರ ಆಗಸ್ಟ್ ೧೮ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಭಾವಿಸಲಾಗಿದೆ. ಆದರೆ ಈ ಘಟನೆ ವಿವಾದಿತವಾಗಿದೆ.



Monday, January 17, 2011

ಸ್ವಾಮಿ ವಿವೇಕಾನಂದ



ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨೧೮೬೩ - ಜುಲೈ ೪೧೯೦೨ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿ
ಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ.ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವ ದಿನ"ವೆಂದು ಆಚರಿಸಲಾಗುತ್ತದೆ.

ಕಲಕತ್ತೆಯಲ್ಲಿ ಜನನ :

ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩ ರಲ್ಲಿ ಕಲಕತ್ತೆಯಲ್ಲಿ ಜನಿಸಿದರು. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ವಿವೇಕಾನಂದ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅದ್ವೈತಸಿದ್ಧಾಂತದ ಉಪಯುಕ್ತತೆಯನ್ನು ಬೋಧಿಸಿದರು.

ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ಸಹ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಅದ್ವೈತ ಸಿದ್ಧಾಂತಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು. ಇದೇ ಅವರ ಮಂತ್ರವಾಯಿತು, ಮತ್ತು ಅವರ "ದರಿದ್ರ ನಾರಾಯಣ ಸೇವೆ' ಎಂಬ ತತ್ತ್ವಕ್ಕೆ ದಾರಿ ಮಾಡಿಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು. ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ

ವಿವೇಕಾನಂದರ ವಿಶ್ವಪರ್ಯಟನೆ :

ಅವರು ಪ್ರಪಂಚದಾದ್ಯಂತ ಪ್ರಯಾಣಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವ ವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು. ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ.
ವಿವೇಕಾನಂದರು, ಧರ್ಮ ಮತ್ತು ಸರ್ಕಾರದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು. ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.

ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು ,ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು.

ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಧರ್ಮಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ "ಅಮೆರಿಕದ ಸಹೋದರ ಸಹೋದರಿಯರೇ" ಎಂಬ ವಾಕ್ಯ ಚಿರವಾಗಿದೆ. ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ಪೂರ್ವ ದೇಶದ ವಿಚಿತ್ರ ಧರ್ಮ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ನ್ಯೂ ಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು. ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ "ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ" (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ. ಸ್ವಾಮಿ ವಿವೇಕಾನಂದರು ದಿವಂಗತರಾದಾಗ ಕೇವಲ ೩೯ ವರ್ಷದವರಾಗಿದ್ದರು.

ಪುಸ್ತಕಗಳು

  • ಭಕ್ತಿ ಯೋಗ
  • ಜ್ಞಾನ ಯೋಗ
  • ಕರ್ಮ ಯೋಗ
  • ರಾಜ ಯೋಗ
  • ಸಂಪೂರ್ಣ ಕೃತಿಗಳು
  • ಪಾಕಿಸ್ತಾನ ಪುಸ್ತಕ

    ಸಿಂಹ ವಾಣಿ

    • ಎದ್ದೇಳಿ, ಕಾರ್ಯೋನ್ಮುಕರಾಗಿ ಈ ಬದುಕಾದರು ಎಷ್ಟು ದಿನ ಮಾನವರಾಗಿ ಹುಟ್ಟಿದಮೇಲೆ ಏನಾದರು ಸಾಧಿಸಿ
    • ಏಳಿ, ಎದ್ದೇಳಿ ಕಬ್ಬಿಣದ ಮಾಂಸಖಂಡ, ಉಕ್ಕಿನ ನರಮಂಡಲ,ವಿಧ್ಯುತ್ ಇಚ್ಛಾಶಕ್ತಿಯನ್ನು ಬೆಳಸಿಕೊಳ್ಳಿ ಕಾರ್ಯಪ್ರವೃತ್ತರಾಗಿ
    • ನಿಮ್ಮ ಯೋಚನೆಯಂತೆ ನೀವು, ನೀವೊಬ್ಬ ಋಷಿ ಎಂದು ಭಾವಿಸಿದರೆ ಋಷಿಯೇ ಆಗುತ್ತೀರಿ
    • ತಾನು ಧುರ್ಬಲ ಎಂದು ಹೇಳುವುದು ಅತ್ಯಂತ ದೊಡ್ಡ ಅಪರಾಧ.
    • ಈ ಪ್ರಪಂಚದಲ್ಲಿರುವ ಎಲ್ಲಾಶಕ್ತಿಗಳು ಈಗಾಗಲೆ ನಮ್ಮವು, ನಮ್ಮ ಕಣ್ಣಿಗೆ ನಾವೇ ಬಟ್ಟೆ ಕಟ್ಟಿ ಕಟ್ಟಿಕೊಂಡು ಕತ್ತಲೆ ಎನ್ನುತ್ತಿದ್ದೇವೆ
    • ಮನದೊಳಗೆ ಪುಸ್ತಕ ತೆರೆಯದ ಹೊರತು ಎಷ್ಟು ಪುಸ್ತಕ ಓದಿದರು ವ್ಯರ್ಥ
    • ಜೀವನವೋಂದು ಗರಡಿ ಮನೆ ಇಲ್ಲಿ ಬಲಿಷ್ಥರಾಗಲು ಬಂದಿದ್ದೇವೆ