ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿ
ಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ.ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವ ದಿನ"ವೆಂದು ಆಚರಿಸಲಾಗುತ್ತದೆ.
ಕಲಕತ್ತೆಯಲ್ಲಿ ಜನನ :
ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರನಾಥ ದತ್ತ. ಇವರು ೧೮೬೩ ರಲ್ಲಿ ಕಲಕತ್ತೆಯಲ್ಲಿ ಜನಿಸಿದರು. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ವಿವೇಕಾನಂದ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.
ಅದ್ವೈತಸಿದ್ಧಾಂತದ ಉಪಯುಕ್ತತೆಯನ್ನು ಬೋಧಿಸಿದರು.
ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ಸಹ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಅದ್ವೈತ ಸಿದ್ಧಾಂತಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು. ಇದೇ ಅವರ ಮಂತ್ರವಾಯಿತು, ಮತ್ತು ಅವರ "ದರಿದ್ರ ನಾರಾಯಣ ಸೇವೆ' ಎಂಬ ತತ್ತ್ವಕ್ಕೆ ದಾರಿ ಮಾಡಿಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು. ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ
ವಿವೇಕಾನಂದರ ವಿಶ್ವಪರ್ಯಟನೆ :
ಅವರು ಪ್ರಪಂಚದಾದ್ಯಂತ ಪ್ರಯಾಣಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವ ವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು. ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ.
ವಿವೇಕಾನಂದರು, ಧರ್ಮ ಮತ್ತು ಸರ್ಕಾರದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು. ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು ,ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು.
ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು೧೮೯೩ ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಧರ್ಮಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ "ಅಮೆರಿಕದ ಸಹೋದರ ಸಹೋದರಿಯರೇ" ಎಂಬ ವಾಕ್ಯ ಚಿರವಾಗಿದೆ. ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ಪೂರ್ವ ದೇಶದ ವಿಚಿತ್ರ ಧರ್ಮ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ನ್ಯೂ ಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು. ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ "ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ" (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ. ಸ್ವಾಮಿ ವಿವೇಕಾನಂದರು ದಿವಂಗತರಾದಾಗ ಕೇವಲ ೩೯ ವರ್ಷದವರಾಗಿದ್ದರು.
ಪುಸ್ತಕಗಳು
- ಭಕ್ತಿ ಯೋಗ
- ಜ್ಞಾನ ಯೋಗ
- ಕರ್ಮ ಯೋಗ
- ರಾಜ ಯೋಗ
- ಸಂಪೂರ್ಣ ಕೃತಿಗಳು
- ಪಾಕಿಸ್ತಾನ ಪುಸ್ತಕ
ಸಿಂಹ ವಾಣಿ
- ಎದ್ದೇಳಿ, ಕಾರ್ಯೋನ್ಮುಕರಾಗಿ ಈ ಬದುಕಾದರು ಎಷ್ಟು ದಿನ ಮಾನವರಾಗಿ ಹುಟ್ಟಿದಮೇಲೆ ಏನಾದರು ಸಾಧಿಸಿ
- ಏಳಿ, ಎದ್ದೇಳಿ ಕಬ್ಬಿಣದ ಮಾಂಸಖಂಡ, ಉಕ್ಕಿನ ನರಮಂಡಲ,ವಿಧ್ಯುತ್ ಇಚ್ಛಾಶಕ್ತಿಯನ್ನು ಬೆಳಸಿಕೊಳ್ಳಿ ಕಾರ್ಯಪ್ರವೃತ್ತರಾಗಿ
- ನಿಮ್ಮ ಯೋಚನೆಯಂತೆ ನೀವು, ನೀವೊಬ್ಬ ಋಷಿ ಎಂದು ಭಾವಿಸಿದರೆ ಋಷಿಯೇ ಆಗುತ್ತೀರಿ
- ತಾನು ಧುರ್ಬಲ ಎಂದು ಹೇಳುವುದು ಅತ್ಯಂತ ದೊಡ್ಡ ಅಪರಾಧ.
- ಈ ಪ್ರಪಂಚದಲ್ಲಿರುವ ಎಲ್ಲಾಶಕ್ತಿಗಳು ಈಗಾಗಲೆ ನಮ್ಮವು, ನಮ್ಮ ಕಣ್ಣಿಗೆ ನಾವೇ ಬಟ್ಟೆ ಕಟ್ಟಿ ಕಟ್ಟಿಕೊಂಡು ಕತ್ತಲೆ ಎನ್ನುತ್ತಿದ್ದೇವೆ
- ಮನದೊಳಗೆ ಪುಸ್ತಕ ತೆರೆಯದ ಹೊರತು ಎಷ್ಟು ಪುಸ್ತಕ ಓದಿದರು ವ್ಯರ್ಥ
- ಜೀವನವೋಂದು ಗರಡಿ ಮನೆ ಇಲ್ಲಿ ಬಲಿಷ್ಥರಾಗಲು ಬಂದಿದ್ದೇವೆ
No comments:
Post a Comment